Karnataka Jobs: ಡಿಪ್ಲೋಮಾ, ITI ಪಾಸಾದವರಿಗೆ ಹಾವೇರಿಯಲ್ಲಿ ಸರ್ಕಾರಿ ಉದ್ಯೋಗ, ಮಾಸಿಕ ವೇತನ ₹15,000
ಜನವರಿ 13ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
DHFWS Haveri Recruitment 2022: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Society Haveri) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಮೆಡಿಕಲ್ ಆಕ್ಸಿಜನ್ ಟೆಕ್ನಿಷಿಯನ್ಸ್(Medical Oxygen technicians) ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ(Diploma), ಐಟಿಐ(ITI) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 13ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ haveri.nic.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ- ಹಾವೇರಿ |
ಹುದ್ದೆಯ ಹೆಸರು | ಮೆಡಿಕಲ್ ಆಕ್ಸಿಜನ್ ಟೆಕ್ನಿಷಿಯನ್ಸ್ |
ಒಟ್ಟು ಹುದ್ದೆಗಳು | 15 |
ವಿದ್ಯಾರ್ಹತೆ | ಡಿಪ್ಲೋಮಾ, ಐಟಿಐ |
ಉದ್ಯೋಗದ ಸ್ಥಳ | ಹಾವೇರಿ |
ವೇತನ | ಮಾಸಿಕ ₹ 15,000 |
ಅರ್ಜಿ ಸಲ್ಲಿಕೆ ವಿಧಾನ | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 17/12/2021 |
ಸಂದರ್ಶನ ನಡೆಯುವ ದಿನಾಂಕ | 13/01/2022 |
ಶೈಕ್ಷಣಿಕ ಅರ್ಹತೆ:
DHFWS ಹಾವೇರಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಬಯೋ-ಮೆಡಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಇನ್‌ಸ್ಟ್ರುಮೆಂಟೇಶನ್/ ಮೆಕ್ಯಾನಿಕಲ್/ ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್/ ಮೇಂಟೆನೆನ್ಸ್ ಮೆಕ್ಯಾನಿಕ್‌ನಲ್ಲಿ ಡಿಪ್ಲೊಮಾ, ITI ಪೂರ್ಣಗೊಳಿಸಿರಬೇಕು.
ಅನುಭವ:
ಅಭ್ಯರ್ಥಿಗಳು ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು ಅಥವಾ ವೈದ್ಯಕೀಯ ಸಲಕರಣೆ/ವೈದ್ಯಕೀಯ ಆಕ್ಸಿಜನ್ ಪ್ಲಾಂಟ್ ಸೇವೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವಯಸ್ಸಿನ ಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು DHFWS ಹಾವೇರಿ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ ನಿಯಮಾವಳಿ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿಯ ಮೆಡಿಕಲ್ ಆಕ್ಸಿಜನ್ ಟೆಕ್ನಿಷಿಯನ್ಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 15,000 ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/12/2021
ಸಂದರ್ಶನ ನಡೆಯುವ ದಿನಾಂಕ: 13/01/2022
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ತಾಲೂಕು ಆರೋಗ್ಯ ಭವನ
ತಾಲೂಕು ವೈದ್ಯಾಧಿಕಾರಿಗಳ ಕಚೇರಿ
ಪಿ.ಬಿ.ರಸ್ತೆ
ಹಾವೇರಿ
ಕರ್ನಾಟಕ
- 108 views